ಕಲಬುರಗಿಯ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಜಹೀರಾ ನಸೀಮ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದೆ.
ಸಿಬ್ಬಂದಿಗಳು ಮತಪೆಟ್ಟಿಗೆಗಳನ್ನು ಮತ ಎಣಿಕೆ ಸಭಾಂಗಣದತ್ತ ಕೊಂಡೊಯ್ಯುತ್ತಿದ್ದಾರೆ. ಒಟ್ಟು 14 ಟೇಬಲ್ಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

















