ಮೈಸೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ಮೈಸೂರಿನ ಜನತೆ ತೀವ್ರ ಆತಂಕದಲ್ಲಿದ್ದಾರೆ. ಮೈಸೂರಿನ ಶಾಂತವೇರಿ ಗೋಪಾಲಗೌಡ ನಗರದಲ್ಲಿ ಬೆಳಗಿನ ಜಾವ 4 ಗಂಟೆಯ ವೇಳೆಗೆ ಚಿರತೆಯೊಂದು ಓಡಾಡಿದ್ದು, ಈ ದೃಶ್ಯ ಬಡಾವಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿರತೆ ಪ್ರತ್ಯಕ್ಷದಿಂದ ಬಡಾವಣೆ ನಿವಾಸಿಗಳು ತೀವ್ರ ಭಯಭೀತರಾಗಿದ್ದು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.



















