ಬೆಂಗಳೂರು: ನೀವೇನಾದರೂ ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (BEL Recruitment 2026) ಖಾಲಿ ಇರುವ 350 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 350 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 350
ಹುದ್ದೆಗಳ ಹೆಸರು: ಪ್ರೊಬೇಷನರಿ ಎಂಜಿನಿಯರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 18
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ, ಎಲೆಕ್ಟ್ರಾನಿಕ್ಸ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bel-india.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.



















