ಮೈಸೂರು:ರಾಜಮನೆತನ ಕುರಿತು ಸಚಿವ ಯತೀಂದ್ರ ನೀಡಿದ್ದ ಹೇಳಿಕೆ ವಿರುದ್ಧ ನಾಳೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಈ ಪ್ರತಿಭಟನೆಯನ್ನು ನಡೆಸದಂತೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮನವಿ ಮಾಡಿದ್ದಾರೆ.
ಅರಮನೆ ಹಾಗೂ ತಮ್ಮ ಕುಟುಂಬದ ಬಗ್ಗೆ ಸಾರ್ವಜನಿಕರಿಗಿರುವ ಕಾಳಜಿಗೆ ಚಿರಋಣಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಿಚಾರ ಮುಂದಿನ ದಿನಗಳಲ್ಲಿ ಸರಿ ಹೋಗುವ ಆಶಯವಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಪ್ರಮೋದಾ ದೇವಿ ಒಡೆಯರ್ ವಿನಂತಿಸಿದ್ದಾರೆ.


















