ಬೆಂಗಳೂರು:ನವೆಂಬರ್ 1ರಂದು ಭಾನುವಾರವಾದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಆದೇಶವು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗಲಿದೆ.
ನಿಯಮಾನುಸಾರ ಹಾಗೂ ಗೌರವಪೂರ್ವಕವಾಗಿ ರಾಜ್ಯೋತ್ಸವ ಆಚರಿಸಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಳರ್ ಸುತ್ತೋಲೆ ಹೊರಡಿಸಿದ್ದಾರೆ. 2026-27ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.


















