ಎಸ್ಐಆರ್ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆ, ಇದೀಗ ಸ್ವತಃ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ–7 ಮೂಲಕ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಬಿಜೆಪಿಯ ಷಡ್ಯಂತ್ರ ನಡೀತಿತ್ತು.
ಈ ಕುತಂತ್ರವನ್ನು ರಾಷ್ಟ್ರ ನಾಯಕರಾದ ರಾಹುಲ್ ಗಾಂಧಿ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ವಿಫಲಗೊಳಿಸಲಾಗಿದೆ ಎಂಬುದೇ ನನ್ನ ಹೇಳಿಕೆಯ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಎಸ್ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದಿದ್ದಾರೆ.

















