ರಾಜ್ಯಾದ್ಯಂತ ಇರುವ ಪ್ಯಾಕೇಜ್ಡ್ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಂಡು ದಿಢೀರ್ ದಾಳಿ ನಡೆಸಿ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಒಟ್ಟು 45 ನೀರಿನ ಘಟಕಗಳ ತಪಾಸಣೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ಅಧಿಕಾರಿಗಳು ತಕ್ಷಣವೇ ನೋಟಿಸ್ ಜಾರಿ ಮಾಡಲಾಗಿದೆ.
ತಪಾಸಣೆ ವೇಳೆ ನೀರಿನ ಬಾಟಲಿಗಳ ಲೇಬಲ್ನಲ್ಲಿ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ, ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಡ್ಡಾಯ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಕೀಟ ನಿಯಂತ್ರಣ ಪ್ರಮಾಣಪತ್ರ ಇಲ್ಲದಿರುವುದು ಅಧಿಕಾರಿಗೆ ಸಿಕ್ಕಿಬಿದ್ದಿದೆ. ಸದ್ಯ ದಾಳಿ ನಡೆಸಿರುವ ಅಧಿಕಾರಿಗಳು ಒಟ್ಟು 32 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿದ್ದು, ಅಕ್ರಮ ಎಸಗುವ ಘಟಕಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
















