ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯವಾಗಲಿ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಸರ್ಕಾರಕ್ಕೆ ತೀವ್ರ ಆಗ್ರಹ ಕೇಳಿ ಬಂದಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷಾ ಬೋಧನೆಯನ್ನು ಕಡ್ಡಾಯಗೊಳಿಸಲು ಖಡಕ್ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ.
ಅಷ್ಟೇ ಅಲ್ಲ, ಆವರಣದಲ್ಲಿ ಕನ್ನಡ ಮಾತನಾಡಿದ್ರೆ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿರುವ ಶಾಲೆ-ಕಾಲೇಜುಗಳ ಅಮಾನವೀಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿರುವ ಕರವೇ, ಇಂತಹ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.


















