ಬೆಂಗಳೂರು: ನೀವೇನಾದರೂ ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ ನಿಮಗೊಂದು ಸಿಹಿ ಸುದ್ದಿ ಕಾದಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (NMPA Recruitment 2026) ಖಾಲಿ ಇರುವ 26 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದು ಫ್ರೆಶರ್ ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಮಂಗಳೂರು ಬಂದರು ಪ್ರಾಧಿಕಾರ
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 26
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 5
ವಿವಿಧ ವಿಭಾಗಗಳಲ್ಲಿ ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಎ, ಬಿಎಸ್ಸಿ, ಬಿ.ಕಾಂ, ಬಿ.ಇ ಹಾಗೂ ಬಿ.ಟೆಕ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂ.ವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://newmangaloreport.gov.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಮೂಲಕ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಬಳಿಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Asst. Secretary (PAC), Administration Department, New Mangalore Port Authority, Panambur – 575010
ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ



















