ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯಲ್ಲಿ (CSIR Recruitment 2026) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 28 ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್
ಹುದ್ದೆಗಳು: 28
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 18
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ csir.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು


















