ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ (BHEL Recruitment 2026) ಖಾಲಿ ಇರುವ 660 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ವೆಲ್ಡರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 660
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಫಿಟ್ಟರ್, ವೆಲ್ಡರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 18
278 ಫಿಟ್ಟರ್, 104 ವೆಲ್ಡರ್, 90 ಎಲೆಕ್ಟ್ರಿಶಿಯನ್, 101 ಮೆಷಿನಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲೂ ಹಲವು ಹುದ್ದೆಗಳು ಖಾಲಿ ಇವೆ. ಆಯಾ ಹುದ್ದೆಗಳಿಗೆ ಆಯ್ಕೆಯಾದ ಅನುಗುಣವಾಗಿ ಮಾಸಿಕ 65 ಸಾವಿರ ರೂಪಾಯಿವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಎನ್ಎಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ. ಜನರಲ್, ಒಬಿಸಿಯವರಿಗೆ 1,072 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ 472 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ bhel.com ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು


















