ಬೆಂಗಳೂರು: ನೀವೇನಾದರೂ ಪದವಿ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ದೇಶದ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 20 ಹುದ್ದೆಗಳ ನೇಮಕಾತಿಗೆ (Supreme Court of India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸುಪ್ರೀಂ ಕೋರ್ಟ್
ಹುದ್ದೆ ಹೆಸರು: ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್)
ಒಟ್ಟು ಹುದ್ದೆಗಳು: 20
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 15
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಶಾರ್ಟ್ ಹ್ಯಾಂಡ್ ಗೊತ್ತಿರುವುದು ಕಡ್ಡಾಯವಾಗಿದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಹಾಗೂ ಜನರಲ್ ಅಭ್ಯರ್ಥಿಗಳಿಗೆ 1,500 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ 750 ರೂ. ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಬ್ಜೆಕ್ಟಿವ್ ಟೈಫ್ ಟೆಸ್ಟ್, ಶಾರ್ಟ್ ಹ್ಯಾಂಡ್ ಟೆಸ್ಟ್, ಕಂಪ್ಯೂಟರ್ ನಲ್ಲಿ ಟೈಪಿಂಗ್ ಸ್ಪೀಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.sci.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು


















