ಬೆಂಗಳೂರು: ಕೋಲಾರದ ಟಮಕಾದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ (Bengaluru North University Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1 ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ
ಹುದ್ದೆಗಳ ಹೆಸರು: ದೈಹಿಕ ಶಿಕ್ಷಣ ನಿರ್ದೇಶಕರು
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಕೋಲಾರ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 17
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಪಿಇಡಿ, ಎಂ.ಫಿಲ್, ಪಿಎಚ್.ಡಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://bnu.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಧಿಸೂಚನೆ ಓದಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ರಿಜಿಸ್ಟ್ರಾರ್,
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಡಳಿತ ಕಚೇರಿ,
ಶ್ರೀ ದೇವರಾಜ ಅರಸು ಅವಸು ಬಡಾವಣೆ, ಟಮಕಾ,
ಕೋಲಾರ – 563103.



















