ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೂಪರ್ ವೈಸರ್ ಹುದ್ದೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಸೂಪರ್ ವೈಸರ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಮಲ್ಪೆ, ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 9
ಮೆಕ್ಯಾನಿಕಲ್ ಹಾಗೂ ನೆಸ್ಟಿಂಗ್ ವಿಭಾಗದಲ್ಲಿ ತಲಾ ಒಂದು ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 1.10 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ cochinshipyard.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ:ಬೆಂಗಳೂರು ಉತ್ತರ ವಿವಿಯಲ್ಲಿ 1 ಹುದ್ದೆಯ ನೇಮಕಾತಿ: 35 ಸಾವಿರ ರೂಪಾಯಿ ಸ್ಯಾಲರಿ



















