ಬೆಂಗಳೂರು : ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಎಲ್ಐಎಂ ಪ್ರಾಜೆಕ್ಟ್ ಟ್ರೈನಿ
ಒಟ್ಟು ಹುದ್ದೆಗಳು: 07
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 19
7 ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಮ್ಯಾನೇಜ್ ಮೆಂಟ್ (ಎಲ್ಐಎಂ) ಪ್ರಾಜೆಕ್ಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಲ್ಐಬಿ ಹಾಗೂ ಎಂ.ಎಲ್ಐಬಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 26 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ recruitment.iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು.
ಇದನ್ನೂ ಓದಿ:ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ : 1.10 ಲಕ್ಷ ರೂ. ಸ್ಯಾಲರಿ



















