ಮೈಸೂರಿನ ರಿಂಗ್ ರಸ್ತೆ ಬಳಿ ನಿನ್ನೆ ಸಂಜೆ ಕಂಟೇನರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನ ನಂದಿನಿ ಬಡಾವಣೆಯ ನಿವಾಸಿ ಕಾತ್ಯಾಯಿನಿ ಮೃತಪಟ್ಟ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಪತಿ ಮಹದೇವಪ್ಪ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಕಂಟೇನರ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಹಿಂಬದಿ ಕುಳಿತಿದ್ದ ಕಾತ್ಯಾಯಿನಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಕಂಟೇನರ್ ವಾಹನ ಚಾಲಕ ಪರಾರಿಯಾಗಿದ್ದಾನೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.


















