ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿ ಮೈತ್ರಿಕೂಟದಿಂದ ಬೃಹತ್ ಸಮಾವೇಶ ಹಾಗೂ ಶಕ್ತಿ ಪ್ರದರ್ಶನ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಕಾಂಗ್ರೆಸ್ ಸೇರಿ 18 ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ವೋಟ್ ಚೋರಿ ವಿರುದ್ಧ ಕ್ರಮ ನಿಶ್ಚಿತ ಎಂದಿರುವ ರಾಹುಲ್ ಗಾಂಧಿ, ಜ್ಞಾನೇಶ್ ಜೈಲಿಗೆ ಹೋಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದ್ದಾರೆ. ಅಲ್ಲದೆ, ಜ್ಞಾನೇಶ್ ಬಳಿ ನೀವೇ ಬನ್ನಿ ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.



















