ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಈ ಹವಾಮಾನ ವೈಪರೀತ್ಯ ನವೆಂಬರ್ 5ರವರೆಗೆ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಮೈಸೂರು, ಮಂಡ್ಯ, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

















