ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಭಾಗವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ವಿಜಯೇಂದ್ರ ಅವರ ಮನೆ ಬಳಿ ಬಿತ್ತಿ ಪತ್ರಗಳನ್ನು ಅಂಟಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧದ ಹೇಳಿಕೆಗೆ ತಕ್ಷಣವೇ ಕ್ಷಮೆ ಕೋರಬೇಕು ಎಂದು ಬಿತ್ತಿ ಪತ್ರಗಳ ಮೂಲಕ ತೀವ್ರ ಆಗ್ರಹ ವ್ಯಕ್ತಪಡಿಸಲಾಗಿದೆ.

















