ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ವಿರುದ್ಧದ ನಕಲಿ ವಿಡಿಯೋ ಸೋರಿಕೆ ಮಾಡಿದ ಸೂತ್ರಧಾರಿ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿರುವ ಅವರು, ನನ್ನ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಗುಟುರು ಹಾಕಿದ್ದಾರೆ.
ನನ್ನ ಇಮೇಜ್ಗೆ ಧಕ್ಕೆಯಾದರೆ ಇನ್ನುಮುಂದೆ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ, ನಿಮ್ಮ ಮಾತಿಗೆ ಗೌರವ ಕೊಟ್ಟು ಅಧಿಕಾರ ತ್ಯಾಗ ಮಾಡಿದ್ದೇನೆ ಮತ್ತು ಭವಿಷ್ಯದಲ್ಲಿ ಚುನಾವಣಾ ಕಣಕ್ಕೂ ಇಳಿಯಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ತಾವಿನ್ನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಅಲ್ಲದಿದ್ದರೂ ತನ್ನನ್ನು ಮುಗಿಸಲು ಸಂಚು ರೂಪಿಸುತ್ತಿರುವ ಪಿತೂರಿಗಾರ ಯಾರು ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಈ ಹೊಲಸು ರಾಜಕೀಯ ನನಗೇಕೆ ಎಂದು ರಾಹುಲ್ ಗಾಂಧಿ ಎದುರು ತೀವ್ರ ಬೇಸರ ಹೊರಹಾಕಿದ್ದಾರೆ.

















