ಅರ್ನಬ್ ಚಂಡಮಾರುತದ ಬೆನ್ನಲ್ಲೇ ಇದೀಗ ಮುರಸು ಮಹಾಘಾತ ಶುರುವಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ವರುಣನ ಅಬ್ಬರ ಜೋರಾಗಲಿದ್ದು, ಮುರಸು ಚಂಡಮಾರುತದ ನೇರ ಪ್ರಭಾವದಿಂದಾಗಿ ಕರ್ನಾಟಕ ರಾಜ್ಯದಲ್ಲೂ ಭಾರಿ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಸತತ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ಮುರಸು ಚಂಡಮಾರುತದ ಪ್ರಭಾವ ಅತ್ಯಂತ ಹೆಚ್ಚಾಗಿರಲಿದೆ ಎಂದು ಅಂದಾಜಿಸಲಾಗಿದೆ.

















