ಕಾಂಗ್ರೆಸ್ನ ಎಸ್ಐಆರ್ ವಿರುದ್ಧದ ವೋಟ್ ಚೋರಿ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿ ಇಂದಿನಿಂದ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ’ ರ್ಯಾಲಿ ಆಯೋಜಿಸಿದೆ. ಕರ್ನಾಟಕದಲ್ಲಿ ನವೆಂಬರ್ ತಿಂಗಳು ಪೂರ್ತಿ ಈ ಅಭಿಯಾನ ನಡೆಯಲಿದ್ದು, ಇಂದು ಕೋಲಾರದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಹರೀಶ್ ದ್ವಿವೇದಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಜೆನ್-ಝಿ ಯುವಜನರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ರಾಜ್ಯಾದ್ಯಂತ 500ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಎಸ್ಐಆರ್ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದೆ. ಬೆಂಗಳೂರಿನ ಟೌನ್ ಹಾಲ್ನಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಟ್ಟಾರೆ ರಾಜ್ಯದ 800 ಕಡೆಗಳಲ್ಲಿ ಪ್ರತಿ ಯಾತ್ರೆಗೆ 10,000ಕ್ಕೂ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ನಡೆಸಲು ಬೃಹತ್ ಪ್ಲಾನ್ ರೂಪಿಸಲಾಗಿದೆ.



















