ಆಂಧ್ರ ಪ್ರದೇಶದಲ್ಲಿ ಅರ್ನಬ್ ಹಾಗೂ ಮುರಸು ಚಂಡಮಾರುತದಿಂದಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಎದುರಾಗಿದ್ದು, ಅಪಾರ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ಈ ಚಂಡಮಾರುತ ಪೀಡಿತ ಪರಿಸ್ಥಿತಿ ನಿಭಾಯಿಸಲು ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಬೆಸ್ಕಾಂ 550ಕ್ಕೂ ಅಧಿಕ ಲೈನ್ ಮ್ಯಾನ್ ಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯಕ್ಕೆ ವೇಗ ನೀಡಲು ಈ ಕ್ರಮ ಕೈಗೊಳ್ಳಲಾಗಿದ್ದು, ಲೈನ್ ಮ್ಯಾನ್ಗಳ ಜೊತೆಗೆ ಅತ್ಯಾಧುನಿಕ ಉಪಕರಣಗಳನ್ನೂ ರವಾನಿಸಲಾಗಿದೆ. ಪರಿಸ್ಥಿತಿ ಹತೋಟಿಗೆ ಬರುವವರೆಗೆ ಕರ್ನಾಟಕದ ಎಸ್ಕಾಂ ಸಿಬ್ಬಂದಿ ಆಂಧ್ರಪ್ರದೇಶದಲ್ಲೇ ಬೀಡು ಬಿಡಲಿದ್ದಾರೆ.


















