\ನವದೆಹಲಿ: ಬಿಜೆಪಿ ಯುವಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಹೇಮಂಗ್ ಜೋಶಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಅವರ ನೇತೃತ್ವದ ನಿಯೋಗವು ದೆಹಲಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷರು, 2028ರ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಿನಿಂದಲೇ ಬೂತ್ ಮಟ್ಟದಲ್ಲಿ ಸಂಘಟನಾತ್ಮಕ ಕಾರ್ಯಗಳನ್ನು ಆರಂಭಿಸುವಂತೆ ಕರೆ ನೀಡಿದರು. ಅಲ್ಲದೆ, ಜಿಲ್ಲೆಯಲ್ಲಿ ಯುವಕರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರನ್ನು ಬಿಜೆಪಿ ಯುವಮೋರ್ಚಾ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಭೇಟಿಯ ವೇಳೆಯಲ್ಲಿ ರಾಷ್ಟ್ರೀಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರಶ್ಮಿ ಸಾಮಂತ್, ಉಡುಪಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಗುರುರಾಜ್ ಮಾಡ ಹಾಗೂ ಪೃಥ್ವಿರಾಜ್ ಮಣಿಪಾಲ್ ಉಪಸ್ಥಿತರಿದ್ದರು.


















