ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಜಮೀನಿನ ಮನೆ ಹೊರಭಾಗದಲ್ಲಿ ಮಲಗಿದ್ದ ರಾಮಚಂದ್ರಪ್ಪ (55) ಎಂಬುವರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ಇವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಗ್ರಾಮದ ಬಳಿ ಹಲವು ಬಾರಿ ಉಪಟಳ ನೀಡುತ್ತಿದ್ದ ಚಿರತೆ ಈ ಕೃತ್ಯ ಎಸಗಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಶುರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.















