ಬೆಂಗಳೂರು: ಕರ್ನಾಟಕ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಕನಸು ಕಾಣುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. 218 ಜೂನಿಯರ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 218
ಹುದ್ದೆಗಳ ಹೆಸರು: ಜೂನಿಯರ್ ಎಂಜಿನಿಯರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 26
ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಅಸಿಸ್ಟಂಟ್ ಟೌನ್ ಪ್ಲಾನರ್, 17 ಜೂನಿಯರ್ ಎಂಜಿನಿಯರ್, ಉಳಿದ ಭಾಗಗಳಲ್ಲಿ 105 ಅಸಿಸ್ಟಂಟ್ ಟೌನ್ ಪ್ಲಾನರ್, 80 ಜೂನಿಯರ್ ಎಂಜಿನಿಯರ್, 2 ಡ್ರಾಪ್ಟ್ಸ್ ಮೆನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಪದವಿ, ಬಿ.ಇ, ಬಿ.ಟೆಕ್, ಡಿಪ್ಲೋಮಾ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ವಿಶೇಷ ಚೇತನರಿಗೆ 250 ರೂ. ಹಾಗೂ ಉಳಿದ ಎಲ್ಲ ಸಮುದಾಯದವರಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 99,400 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cetonline.karnataka.gov.in ಗೆ ಭೇಟಿ ನೀಡಬಹುದು.


















