ಬೆಂಗಳೂರು: ನೀವೇನಾದರೂ ಈಗಷ್ಟೇ ಪದವಿ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಕಂಡುಕೊಳ್ಳಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಶುಭ ಸಮಾಚಾರ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕಿನಲ್ಲಿ ಖಾಲಿ (Indian Bank Recruitment 2026) ಇರುವ 1,500 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಒಟ್ಟು ಹುದ್ದೆಗಳು: 1,500
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 25
ಉದ್ಯೋಗದ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ 35 ಹುದ್ದೆಗಳು ಖಾಲಿ ಇವೆ. 1,500 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 800 ರೂ. ಅರ್ಜಿ ಶುಲ್ಕವಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ ಹಾಗೂ ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ 28 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ indianbank.in ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು


















