ಬೆಂಗಳೂರು: ರಾಜ್ಯಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆರೋಗ್ಯ ಮಿಷನ್ ನಲ್ಲಿ (NHM Karnataka Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಕ್ಸ್ ರೇ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮಿಷನ್, ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 4
ಹುದ್ದೆ ಹೆಸರು: ಎಕ್ಸ್ ರೇ ಟೆಕ್ನಿಶಿಯನ್
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 13
1 ಟಿಬಿ ವಿಸಿಟರ್ ಹಾಗೂ 3 ಎಕ್ಸ್ ರೇ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಯುಸಿ, ಪದವಿ, ಡಿಪ್ಲೋಮಾ, ಎಂಪಿಡಬ್ಲ್ಯೂ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 17,850 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ koppal.nic.in ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು


















