ಬೀದರ್ ನಗರದ ಅಂಬೇಡ್ಕರ್ ವೃತ್ತದ ಬಳಿ ಎಸ್ಐಆರ್ ಹೆಸರಿನಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ, ಅರ್ಹ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ‘ಮತ ಉಳಿಸಿ, ದೇಶ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮೈತ್ರಿಕೂಟದ ಮುಖಂಡರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಟ್ಟುನಿಟ್ಟಿನ ಆಗ್ರಹ ಮಾಡಿದ್ದಾರೆ.



















