ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 390 ಹುದ್ದೆಗಳ ನೇಮಕಾತಿಗಾಗಿ (WCD Chamarajanagar Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಾಮರಾಜನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಚಾಮರಾಜನಗರ
ಒಟ್ಟು ಹುದ್ದೆಗಳು: 390
ಉದ್ಯೋಗ ಸ್ಥಳ: ಚಾಮರಾಜನಗರ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 4
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
119 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 271 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ದ್ವಿತೀಯ ಪಿಯುಸಿ, ಡಿಪ್ಲೋಮಾ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಕನಿಷ್ಠ 19ರಿಂದ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ chamrajnagar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು.



















