ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಹಾಲೇನಹಳ್ಳಿ ಬಳಿ ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ಹೋಗಿದ್ದ 16 ವರ್ಷದ ಬಾಲಕ ವಿಜಯ್ ಕುಮಾರ್ ನೀರಿನ ರಭಸಕ್ಕೆ ಕೊಚ್ಚಿಹೋಗಿ ಸಾವನ್ನಪ್ಪಿದ್ದಾನೆ. ಸ್ನೇಹಿತರ ಜೊತೆ ಈಜಲು ತೆರಳಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಎರಡು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಶವವನ್ನು ಹೊರತೆಗೆಯಲಾಗಿದ್ದು, ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















