ಪೆಟ್ರೋಲ್ಗೆ ಶೇಕಡಾ 30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ಶಾಸಕ ರಿಜ್ವಾನ್ ಅರ್ಷದ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸಚಿವರು ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ತೈಲ ಸರಬರಾಜು ಕಂಪನಿಗಳು ಈ ಆರೋಪವನ್ನು ಸಂಪೂರ್ಣವಾಗಿ ಅಲ್ಲಗಳೆದಿವೆ.
ಪೆಟ್ರೋಲ್ನಲ್ಲಿ ಶೇಕಡಾ 20ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಮಾಡಿಲ್ಲ ಎಂದು ಕಂಪನಿಗಳು ಸ್ಪಷ್ಟನೆ ನೀಡಿವೆ. ರಿಜ್ವಾನ್ ಅರ್ಷದ್ ಮಾಡಿರುವ ಆರೋಪಕ್ಕೆ ತೈಲ ಕಂಪನಿಗಳು ತೀಕ್ಷ್ಣ ತಿರುಗೇಟು ನೀಡಿವೆ. ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.



















