ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬಿಡಿಎ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕುಮಾರ್ ಕೃಪಾ ರಸ್ತೆಯಲ್ಲಿರುವ ಬಿಡಿಎ ಕೇಂದ್ರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಆಯುಕ್ತ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಹೆಬ್ಬಾಳ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಮತ್ತು ಶಿವರಾಂ ಕಾರಂತ ಬಡಾವಣೆ ನೋಂದಣಿ ಬಗ್ಗೆ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆಯಲಿದ್ದಾರೆ. ಇದರೊಂದಿಗೆ ಬಿಡಿಎ ವತಿಯಿಂದ ನೆಡಲಾಗಿರುವ 15 ಲಕ್ಷ ಸಸಿಗಳ ಕುರಿತು ಮಾಹಿತಿ ಕಲೆ ಹಾಕಲಿದ್ದಾರೆ. ಪ್ರಗತಿ ಪರಿಶೀಲನೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.















