ದೀಪಾವಳಿ ಹಬ್ಬದ ವೇಳೆಯೇ ಟ್ರಾನ್ಸ್ಫಾರ್ಮರ್ ಒಂದು ಭೀಕರವಾಗಿ ಹೊತ್ತಿ ಉರಿದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಟ್ರಾನ್ಸ್ಫಾರ್ಮರ್ ಹೊತ್ತಿ ಉರಿದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಹಬ್ಬದ ದಿನಗಳಲ್ಲಿ ಉಂಟಾದ ಓವರ್ಲೋಡ್ ನಿಂದಾಗಿಯೇ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಕೆಇಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















