ಬೆಂಗಳೂರು : ಎಂಬಿಬಿಎಸ್, ಡಿಪ್ಲೋಮಾ ಮುಗಿಸಿ, ರಾಜ್ಯ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹಾವೇರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Haveri recruitment 2026) ಖಾಲಿ ಇರುವ 59 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾವೇರಿ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: 59
ಉದ್ಯೋಗ ಸ್ಥಳ: ಹಾವೇರಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 16
ಮೆಡಿಕಲ್ ಆಫೀಸರ್, ನರ್ಸಿಂಗ್ ಆಫೀಸರ್, ಲ್ಯಾಬ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಬಿಎಸ್ಸಿ, ಎಂಬಿಬಿಎಸ್, ಬಿಎಸ್ಸಿ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ http://haveri.nic.in/ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
District Programme Management Unit, B-Block, District Health and Family Welfare Officer’s office, District Administrative Building, Devagiri, Haveri.


















