ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಟಿಪ್ಪು ಸುಲ್ತಾನ್ ಜನ್ಮಸ್ಥಳಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ದೇವನಹಳ್ಳಿ ಪಟ್ಟಣದ ಟಿಪ್ಪು ಪಾರ್ಕ್ನಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ನಂತರ ಕನ್ನಮಂಗಲ ಪಾಳ್ಯದಲ್ಲಿ ಟಿಪ್ಪು ಸುಲ್ತಾನ್ ವೃತ್ತದ ನಾಮಫಲಕವನ್ನು ಅನಾವರಣಗೊಳಿಸಿದರು. ಪ್ರತಿವರ್ಷ ಟಿಪ್ಪು ಜನ್ಮದಿನದಂದು ದೇವನಹಳ್ಳಿಗೆ ಭೇಟಿ ನೀಡುವ ಅವರು, ದೇವನಹಳ್ಳಿಯಲ್ಲಿ ಟಿಪ್ಪು ಸ್ಮಾರಕವನ್ನು ನಿರ್ಮಾಣ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಈ ವೇಳೆ ಆಗ್ರಹಿಸಿದರು















