ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೋಮು ಭಾವನೆಗೆ ಧಕ್ಕೆ ತಂದ ಆರೋಪದಡಿ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತರು ಈ ದೂರು ನೀಡಿದ್ದಾರೆ.
ಬಿಹಾರ ಮತ್ತು ಹರಿಯಾಣದಲ್ಲಿ ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳುವಿಕೆಗೆ ಆರೆಸ್ಸೆಸ್ ಅನ್ನು ಸಂಪರ್ಕಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸುಳ್ಳು ಹೇಳಿಕೆಯಿಂದ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸಿದ್ದಾರೆ ಎಂದು ಆರೋಪಿಸಿ ಕ್ರಮಕ್ಕೆ ಆಗ್ರಹಿಸಲಾಗಿದೆ.


















