ಬರ ಪರಿಹಾರದ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಎಲ್ಲಾ ಅರ್ಹ ರೈತರಿಗೆ ತಲಾ 5 ಸಾವಿರ ರೂಪಾಯಿ ನೆರವು ಸಿಗಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಮೊದಲ ಕಂತಿನಲ್ಲಿ ಬಿಡುಗಡೆಯಾದ ಹಣವೇ ಅಂತಿಮವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ನಿಯಮದಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಪರಿಹಾರ ನೀಡಲಾಗುತ್ತಿದೆ. 1,500, 2,600 ಮತ್ತು 3,200 ರೂಪಾಯಿ ಕನಿಷ್ಠ ಪರಿಹಾರ ನಿಗದಿಯಾಗಿದ್ದು, 5 ಸಾವಿರದಿಂದ 60 ಸಾವಿರ ರೂಪಾಯಿವರೆಗೂ ಪರಿಹಾರ ಸಿಗಲಿದೆ ಎಂದು ತಿಳಿಸಿದ್ದಾರೆ.
















