ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಪ್ಲಾಸ್ಟಿಕ್ ಸ್ಕ್ರಾಪ್ ಗೋಡೌನ್ಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿ ಅವಘಡ ಸಂಭವಿಸಿದೆ. ಪಟಾಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಸ್ತೂರಿ ಬಾನಗರದ ರುದ್ರಪ್ಪ ಗಾರ್ಡನ್ ಬಳಿ ಈ ಘಟನೆ ನಡೆದಿದೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















