ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಸ್ ನಿಲ್ದಾಣದಲ್ಲಿ ನವೆಂಬರ್ 9 ರಂದು ರೇಣುಕಮ್ಮ ಗಂಗನಾಳ ಎಂಬುವವರ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಳುವಗೇರಿಯ ಕಲ್ಲಪ್ಪ ಜಿಂಗಣಿ ಬಂಧಿತ ಆರೋಪಿ.
ಇಸ್ಪೇಟ್ ಆಟದಲ್ಲಿ ಹಣ ಕಳೆದುಕೊಂಡಿದ್ದ ಆರೋಪಿ, ಮಹಿಳೆಯ ಕತ್ತಿನಲ್ಲಿದ್ದ ಸರ ಕದ್ದು ಪರಾರಿಯಾಗಿದ್ದನು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ 4 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಸರವನ್ನು ವಶಪಡಿಸಿಕೊಂಡಿದ್ದಾರೆ.


















