ಬೆಂಗಳೂರು: ನೀವೇನಾದರೂ ಮೈಸೂರು ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಟೆಕ್ನಿಶಿಯನ್ 2
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 16
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ ಆಗಿರುವ cftri.res.inಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.


















