ಬೆಂಗಳೂರು: ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 30 ಪ್ಯೂನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ
ಒಟ್ಟು ಹುದ್ದೆಗಳು: 30
ಹುದ್ದೆಗಳ ಹೆಸರು: ಪ್ಯೂನ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 4
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿರಬೇಕು. ಕನಿಷ್ಠ 18ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಜನರಲ್ ಕೆಟಗರಿಯವರಿಗೆ 300 ರೂಪಾಯಿ, ಒಬಿಸಿಯವರಿಗೆ 150 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 46,675 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ http://vijayapura.dcourts.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅರ್ಜಿಯ ಜತೆಗೆ ದಾಖಲೆಗಳನ್ನು ಕೂಡ ಸಲ್ಲಿಕೆ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.



















