ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸ್ವಪಕ್ಷದವರ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದಲ್ಲಿ ಬೆನ್ನಿಗೆ ಚೂರಿ ಹಾಕುವವರು ಮತ್ತು ಮೋಸಗಾರರು ಇದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕಾಂಗ್ರೆಸ್ ಅನ್ನ ತಿನ್ನುವವರು ಸ್ವಲ್ಪ ನಿಷ್ಠೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ಪಕ್ಷದಲ್ಲಿ ಯಾರು ಏನೇನು ಮಾಡಿದ್ದಾರೆ ಎಂಬುದು ತಮಗೆ ತಿಳಿದಿದೆ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ತಾವು ಎಲ್ಲವನ್ನೂ ನೋಡಿದ್ದೇನೆ ಮತ್ತು ಸಹಿಸಿಕೊಂಡಿದ್ದೇನೆ ಎಂದು ಅವರು ಹೇಳಿಕೆ ನೀಡಿದ್ದಾರೆ.



















