ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬುಧವಾರ ಬೆಳಗ್ಗೆ ವಾಕಿಂಗ್ ಮಾಡುವಾಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
75 ವರ್ಷದ ಧನಕರ್ ಅವರನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಕೇಂದ್ರಕ್ಕೆ ದಾಖಲಿಸಿ, ಹೃದ್ರೋಗ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಾಕಿಂಗ್ ವೇಳೆ ಕುಸಿದು ಬಿದ್ದ ಅವರನ್ನು ಭದ್ರತಾ ಸಿಬ್ಬಂದಿ ಪಿಸಿಆರ್ ವಾಹನದಲ್ಲಿ ಮನೆಗೆ ಕರೆದೊಯ್ದಿದ್ದರು. ಬಳಿಕ ಐಎಲ್ಬಿಎಸ್ ವೈದ್ಯಕೀಯ ತಂಡ ಹಾಗೂ ಏಮ್ಸ್ ವೈದ್ಯ ಡಾ. ಸಂದೀಪ್ ಸೇಠ್ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯ ಕುರಿತು ಏಮ್ಸ್ ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.


















