ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಹೊಸ ಅರ್ಜಿ ಸಲ್ಲಿಸಿದೆ. 2027ರ ಜನವರಿ 31ರವರೆಗೆ ಚುನಾವಣೆ ನಡೆಸುವ ಗಡುವನ್ನು ವಿಸ್ತರಿಸುವಂತೆ ಆಯೋಗ ಮನವಿ ಮಾಡಿದೆ.ಈ ಹಿಂದೆ ಈ ವರ್ಷದ ಅಂತ್ಯದೊಳಗೆ ಜಿಬಿಎ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆದರೆ ಇದೀಗ ರಾಜ್ಯ ಚುನಾವಣಾ ಆಯೋಗವು ಚುನಾವಣೆಯನ್ನು ಮುಂದೂಡುವಂತೆ ನ್ಯಾಯಾಲಯದ ಮೊರೆ ಹೋಗಿದೆ.
ಅಲ್ಲದೆ, ಹಳೆಯ ಮತದಾರರ ಪಟ್ಟಿಯನ್ನೇ ಬಳಸಿಕೊಂಡು ಚುನಾವಣೆ ನಡೆಸಲು ಅನುಮತಿ ನೀಡುವಂತೆಯೂ ಆಯೋಗ ಕೋರಿದೆ.ರಾಜ್ಯ ಚುನಾವಣಾ ಆಯೋಗದ ಈ ಹೊಸ ಅರ್ಜಿಯಿಂದ ಜಿಬಿಎ ಚುನಾವಣಾ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಆಯೋಗ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ.ಹೀಗಾಗಿ ಜಿಬಿಎ ಚುನಾವಣೆ ನಿಗದಿತ ಸಮಯಕ್ಕೆ ನಡೆಯುತ್ತದೆಯೇ ಅಥವಾ ಮುಂದೂಡಿಕೆಯಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.


















