ಬೆಂಗಳೂರಿನ ವಕೀಲ ಮಂಜುನಾಥ್ ಶೂಟೌಟ್ ಪ್ರಕರಣದ ಪ್ರಮುಖ ಆರೋಪಿ ಅಮಿತ್ ಕುಮಾರ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 19ರಂದು ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಒಂದು ತಿಂಗಳಿಂದ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೈಟ್ಫೀಲ್ಡ್ ಪೊಲೀಸರು ಸೆರೆಹಿಡಿದಿದ್ದಾರೆ.
ತಮಿಳುನಾಡು, ತೆಲಂಗಾಣ, ಬಿಹಾರ ಹಾಗೂ ದೆಹಲಿಯಲ್ಲಿ ಪೊಲೀಸರು ಶೋಧ ನಡೆಸಿದ್ದರು. ಪ್ರಕರಣದ ಮತ್ತೊಬ್ಬ ಆರೋಪಿ ಪವನ್ ದುಬೆಗಾಗಿ ಶೋಧ ಮುಂದುವರಿದಿದೆ.

















