ಬೆಂಗಳೂರಿನಲ್ಲಿ ಮೆಟ್ರೋ ವಿಸ್ತರಣೆ ಹಾಗೂ ಉದ್ಘಾಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸುವ ಪೈಪೋಟಿ ಜೋರಾಗಿದೆ. ಡೈರಿ ಸರ್ಕಲ್ನಿಂದ ಮೆಟ್ರೋ ಮಾರ್ಗದುದ್ದಕ್ಕೂ ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ನಾಯಕರ ಪರವಾಗಿ ಬೃಹತ್ ಫ್ಲೆಕ್ಸ್ಗಳನ್ನು ಹಾಕಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಸ್ವಾಗತ ಕೋರಿದ್ದರೆ, ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಪರವಾಗಿ ಫ್ಲೆಕ್ಸ್ ಹಾಗೂ ಪಕ್ಷದ ಬಾವುಟಗಳನ್ನು ಅಳವಡಿಸಿ ಶಕ್ತಿ ಪ್ರದರ್ಶನ ಮಾಡಿದ್ದು, ರಾಜಕೀಯ ಪೈಪೋಟಿಗೆ ಸಾಕ್ಷಿಯಾಗಿದೆ.



















