ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ತಡರಾತ್ರಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಗರಿಬೊಮ್ಮನಹಳ್ಳಿ ಮೂಲದ ಸಂದೀಪ್ (25) ಮೃತ ದುರ್ದೈವಿ.
ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಸವಾರ ಅತೀವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಐಮಂಗಲ ಪೊಲೀಸ್ ಠಾಣೆಯ ಪಿಎಸ್ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















