ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ 26ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ 715ರಲ್ಲಿ ಅಪಘಾತ ಸಂಭವಿಸಿದೆ. 40 ಪ್ರಯಾಣಿಕರಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಮಿನಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದಿದ್ದರಂದಾಗಿ ಈ ಘಟನೆ ನಡೆದಿದೆ. ಕರ್ನಾಟಕ ನೋಂದಣಿಯ ಕಂಟೈನರ್ಗೆ ಬಸ್ ಡಿಕ್ಕಿ ಹೊಡೆದಿದೆ.
ಬೊಕಾಬಾಟ್ನಿಂದ ನಾಗಾಂವ್ಗೆ ಬಸ್ ಹೋಗುತ್ತಿತ್ತು. ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.



















