ಎಥೆನಾಲ್ ವಿಚಾರದಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಬೆಂಗಳೂರಿನಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಆರೋಪ ಮಾಡಿದ್ದಾರೆ.ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿವೆ. ಆದರೆ, ಅವುಗಳನ್ನ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದ್ದಾರೆ.
ಮೊದಲು ಶೇಕಡಾ 5, ನಂತರ 10 ರಷ್ಟು ಮಿಶ್ರಣ ಮಾಡಬೇಕಾಗಿತ್ತು. ಗರಿಷ್ಠ ಮಿತಿ ಶೇಕಡಾ 20 ರಷ್ಟಿದೆ ಎಂದು ಅವರು ಹೇಳಿದ್ದಾರೆ. ಆದರೆ ಶೇಕಡಾ 30 ರಷ್ಟು ಮಿಶ್ರಣ ಮಾಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.ನಿಗದಿತ ಮಿತಿಗಿಂತ ಶೇಕಡಾ 50 ಹೆಚ್ಚು ಮಿಶ್ರಣ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ. 30% ಎಥೆನಾಲ್ ಮಿಶ್ರಣದಿಂದ ಅದಾನಿ, ಅಂಬಾನಿ ಮತ್ತು ಕೇಂದ್ರ ಸರ್ಕಾರ ಎಷ್ಟು ಲಾಭ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

















